ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ನ್ಯಾಯಾಂಗ ಬಂಧನ
ಪುತ್ತೂರು: ಜು.8ರಂದು ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

ಅಪ್ರಾಪ್ತ ಪ್ರಾಯದ ಬಾಲಕಿಯು ತನ್ನ ತಾಯಿಯೊಂದಿಗೆ, ಪುತ್ತೂರು ನೆಹರೂ ನಗರ ಜಂಕ್ಷನ್ ನಲ್ಲಿ ಬಸ್ ಗಾಗಿ ಕಾಯುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬ ಬಂದು ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ್ದು ಈ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಕಬಕ ನಿವಾಸಿ ನವೀನ್ ಚಂದ್ರ (49) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರಪಡಿಸಿದ್ದು ನ್ಯಾಯಾಲಯವು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.