ಬೆಳ್ತಂಗಡಿ: ಮೇಯಲು ಬಿಟ್ಟಿದ್ದ ಹೋರಿ ಸಂಶಯಾಸ್ಪದ ರೀತಿಯಲ್ಲಿ ಸಾವು
ಬೆಳ್ತಂಗಡಿ: ಮೇಯಲು ಬಿಟ್ಟಿದ್ದ ಹೋರಿಯೊಂದು
ಅಸಹಜ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ಸೋಮವಾರ ಕಿಲ್ಲೂರು ಕೋಯನಗರ ಎಂಬಲ್ಲಿ ನಡೆದಿದೆ.
ಇಸುಬು ಎಂಬವರಿಗೆ ಸೇರಿದ ಹೋರಿಯನ್ನು ಸೋಮವಾರ ಎಂದಿನಂತೆ ಮೇಯಲು ಬಿಟ್ಟಿದ್ದರು. ಸಂಜೆಯ ವೇಳೆ ಹೋರಿ ಸಾವನ್ನಪ್ಪಿರುವುದು ಕಂಡು ಬಂದಿದೆ. ಇದು ವಿಷ ಪ್ರಾಶನದಿಂದ ಸಾವನ್ನಪ್ಪಿರುವಂತೆ ಮೇಲ್ನೋಟಕ್ಕೆ ಕಂಡು ಬಂದಿದ್ದು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ತಾವು ಪ್ರೀತಿಯಿಂದ ಸಾಕುತ್ತಿದ್ದ ಹೋರಿ ಸಂಶಯಾಸ್ಪದವಾಗಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಮನೆಯವರು ತೀವ್ರ ದುಃಖಿತರಾಗಿದ್ದು ಕಣ್ಣೀರು ಸುರಿಸಿದ್ದಾರೆ. ಸ್ಥಳೀಯ ನಿವಾಸಿಗಳು ಕೂಡ ಬೇಸರ ವ್ಯಕ್ತಪಡಿಸಿದ್ದಾರೆ.
ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮರ್ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.