ಕರಾವಳಿರಾಜ್ಯ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ  ಉತ್ತಮವಾಗಿದೆ: ಡಾ.ಜಿ.ಪರಮೇಶ್ವರ್

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಾ ರೀತಿಯಲ್ಲೂ ಉತ್ತಮವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.


ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಇದು ಬರೀ ಹೇಳಿಕೆಯಲ್ಲ. ಇತ್ತೀಚೆಗೆ ನಡೆದ ಕಾನೆರೆನ್ಸ್‌ನಲ್ಲಿ ಮುಖ್ಯಮಂತ್ರಿಯ ಉಪಸ್ಥಿತಿಯಲ್ಲಿ, ವಿವಿಧ ಅಪರಾಧಗಳ ಬಗ್ಗೆ ಮಾಹಿತಿ ಪಡೆದ ವೇಳೆ ರಾಜ್ಯದಲ್ಲಿ ಅಪರಾಧ ಪ್ರಮಾಣ ಕಡಿಮೆಯಾಗಿರುವುದು ಕಂಡುಬಂದಿದೆ. ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದರಿಂದ ಇದು ಸಾಧ್ಯವಾಗಿದೆ ಎಂದರು. ದ.ಕ. ಜಿಲ್ಲೆಯಲ್ಲಿ ವಿಶೇಷ ಕಾರ್ಯಪಡೆ ರಚನೆ ಶಾಂತಿ-ಸುವ್ಯವಸ್ಥೆಗೆ ಪೂರಕವಾಗಿದೆ. ಈ ಬಗ್ಗೆ ಶ್ಲಾಘನೆ ವ್ಯಕ್ತವಾಗಿದೆ. ಬೆಂಗಳೂರು ಬಳಿಕ ಬೆಳೆಯುವಲ್ಲಿ ಅವಕಾಶಗಳಿರುವ ಕರಾವಳಿಯಲ್ಲಿ ಶಾಂತಿ ಅತೀ ಮುಖ್ಯ, ಅದಕ್ಕಾಗಿ ಈ ಭಾಗಕ್ಕೆ ಹೆಚ್ಚು ಗಮನ ಹರಿಸಲಾಗುವುದು ಎಂದು ಗೃಹಸಚಿವರು ತಿಳಿಸಿದರು.


ಮಂಗಳೂರಿನಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯನ್ನು ಪುತ್ತೂರಿಗೆ ವರ್ಗಾಯಿಸಬೇಕು ಎಂಬ ಬೇಡಿಕೆ ಇದೆ. ಈ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಸಾಧಕ-ಬಾಧಕಗಳನ್ನು ಸಂಗ್ರಹಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

Leave a Reply

Your email address will not be published. Required fields are marked *

error: Content is protected !!