ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಬಂಟ್ವಾಳ: ಪ್ರಕರಣದ ವಿಚಾರಣೆಯ ವೇಳೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಜು.10ರಂದು ಕೇರಳದ ಮಂಜೇಶ್ವರದಲ್ಲಿ ದಸ್ತಗಿರಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಬಂಟ್ವಾಳ ಮಂಚಿ ನಿವಾಸಿ ಹಿದಾಯತ್ ಅಲಿಯಾಸ್ ಅಬ್ದುಲ್ಲ ಬಂಧಿತ ಆರೋಪಿ.

ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಆರೋಪಿಯು ಜಾಮೀನಿನ ಮೇಲೆ ಬಿಡುಗಡೆಗೊಂಡು ಆ ಬಳಿಕ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ 2023ರ ಡಿಸೆಂಬರ್‌ನಿಂದ ತಲೆಮರೆಸಿಕೊಂಡಿದ್ದನು. ಈ ಹಿನ್ನೆಲೆ ಆರೋಪಿಯ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಜು. 10ರಂದು ಅಕ್ರ: 74/2025 ಕಲಂ: 269 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಿಸಲಾಗಿತ್ತು.