ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ದೂರು ನೀಡಿದ್ದ ವ್ಯಕ್ತಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಕ್ಕೂ ಅಧಿಕ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದ ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಜು.11ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜು.4 ರಂದು ವಕೀಲರ ಮೂಲಕ ದೂರು ನೀಡಿದ್ದ ವ್ಯಕ್ತಿ ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಅವರ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.