ಫೇಸ್ ಬುಕ್ ಖಾತೆಯಲ್ಲಿ ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದಂತೆ ಅಶ್ಲೀಲ ಪೋಸ್ಟ್: ಪ್ರಕರಣ ದಾಖಲು
ಫೇಸ್ ಬುಕ್ ಖಾತೆಯಲ್ಲಿ ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದಂತೆ, ಅಶ್ಲೀಲ ಸಂದೇಶವಿರುವ ಪೋಸ್ಟ್ ಪ್ರಸಾರ ಮಾಡಿರುವ ಆರೋಪದಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡಬ ಕೌಕ್ರಾಡಿ ಗ್ರಾಮದ ನಿವಾಸಿ ಜಯಂತ ಟಿ ಎಂಬವರು ದೂರು ನೀಡಿದ್ದು ಅವರು ಜು.11ರಂದು ತನ್ನ ಫೇಸ್ ಬುಕ್ ಖಾತೆಯನ್ನು ಪರಿಶೀಲಿಸುತ್ತಿದ್ದಾಗ, ಪ್ರವೀಣ್ ಲೊಬೋ ಎಂಬ ಪೇಸ್ ಬುಕ್ ಖಾತೆಯಲ್ಲಿ ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದಂತೆ, ಅಶ್ಲೀಲ ಸಂದೇಶವಿರುವ ಪೋಸ್ಟ್ ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ಜಯಂತ ಟಿ ಎಂಬವರು ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ : 58/2025 ಕಲಂ: 296 ಬಿಎನ್ ಎಸ್ 2023 ರಂತೆಪ್ರಕರಣ ದಾಖಲಾಗಿದೆ.