ಧರ್ಮಸ್ಥಳದ: ಸಾಕ್ಷಿ ದೂರುದಾರನ ಗುರುತು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗ, ತನಿಖೆ ಆರಂಭಿಸಿದ ಪೊಲೀಸರು
ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಶವಗಳನ್ನು ಹೂತು ಹಾಕಿರುವ ಬಗ್ಗೆ ಹೇಳಿಕೆನೀಡಿದ್ದ ಸಾಕ್ಷಿ ದೂರುದಾರನ ಗುರುತನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗ ಪಡಿಸಿರುವ ಬಗ್ಗೆ ಬಂಟ್ವಾಳ ಪೊಲೀಸ್ ಉಪ ಅಧೀಕ್ಷಕರು ತನಿಖೆ ಆರಂಭಿಸಿದ್ದಾರೆ.

ಪ್ರಕರಣದ ಸಾಕ್ಷಿ ದೂರುದಾರನ ಗುರುತನ್ನು ಸಮಾಜಿಕ ಜಾಲತಾಣಗಳಲ್ಲಿ ಬಹಿರಂಗ ಪಡಿಸಿರುವ ಬಗ್ಗೆ ಬಂಟ್ವಾಳ ಪೊಲೀಸ್ ಉಪ ಅಧೀಕ್ಷಕರು ವಿಚಾರಣೆಯನ್ನು ಆರಂಭಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಜು.13ರಂದು ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.