2003ರಲ್ಲಿ ಧರ್ಮಸ್ಥಳದಿಂದ ಕಣ್ಮರೆಯಾಗಿರುವ ಅನನ್ಯ ಭಟ್ ತಾಯಿಯಿಂದ ಎಸ್ಪಿಗೆ ದೂರು
ಮಂಗಳೂರು: 2003ರಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆ ಬಂದು ಬಳಿಕ ಕಣ್ಮರೆಯಾಗಿರುವ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ಅನನ್ಯ ಭಟ್ ನಾಪತ್ತೆ ಬಗ್ಗೆ ವಿಚಾರಣೆ ನಡೆಸುವಂತೆ ಯುವತಿಯ ತಾಯಿ ಜು.15ರಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಯಲ್ಲಿ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ್ದಾರೆ. ಸದ್ರಿ ದೂರಿನ ಬಗ್ಗೆ ವಿಚಾರಣೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧೀಕ್ಷಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.