ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಣ್ಣಗುಂಡಿಯಲ್ಲಿ ಗುಡ್ಡ ಕುಸಿತ: ವಾಹನ ಸಂಚಾರ ಸ್ಥಗಿತ
ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75 ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಈಗಾಗಲೇ ಮಣ್ಣು ತೆಗೆಯುವ ಕಾರ್ಯ ಆರಂಭವಾಗಿರುತ್ತದೆ. ಇನ್ನಷ್ಟು ಮಣ್ಣು ಕುಸಿಯುತ್ತಿದ್ದು, ಮಣ್ಣು ತೆಗೆಯುವ ಕಾರ್ಯ ಮಧ್ಯಾಹ್ನದವರೆಗೆ ಇರುವುದರಿಂದ, ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಬದಲಿ ರಸ್ತೆಯಲ್ಲಿ ಸಂಚರಿಸಬೇಕಾಗಿ ಪೊಲೀಸರು ವಿನಂತಿಸಿದ್ದಾರೆ.