ಉಪ್ಪಿನಂಗಡಿ: ಚೂರಿಯಿಂದ ಇರಿದು ಪತ್ನಿಯನ್ನು ಕೊಲೆ ಮಾಡಿದ ಪತಿ!
ಉಪ್ಪಿನಂಗಡಿ: ಪತಿಯೇ ತನ್ನ ಪತ್ನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ದಾರುಣ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಎಂಬಲ್ಲಿ ಜು.17ರಂದು ನಡೆದಿರುವುದಾಗಿ ತಿಳಿದು ಬಂದಿದೆ.
ಬಾಜಾರು ನಿವಾಸಿ ಝೀನತ್ (39) ಮೃತ ಮಹಿಳೆ. ಪತಿ ರಫೀಕ್ ಕೊಲೆ ಮಾಡಿದ ಆರೋಪಿ.

ಗುರುವಾರ ಬೆಳಗ್ಗೆ ಪತಿ-ಪತ್ನಿ ನಡುವೆ ಜಗಳ ನಡೆದಿದ್ದು, ಈ ವೇಳೆ ಪತ್ನಿಗೆ ರಫೀಕ್ ಚೂರಿಯಿಂದ ಇರಿದು ಹತ್ಯೆ ಮಾಡಿರುವುದಾಗಿ ತಿಳಿದು ಬಂದಿದೆ.
ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.