ಪಂಜಾಬ್: ಆಮ್ ಆದ್ಮಿ ಪಕ್ಷದ ಶಾಸಕಿ ರಾಜೀನಾಮೆ!
ಎಎಪಿ ನಾಯಕಿ ಅನ್ಮೋಲ್ ಗಗನ್ ಮಾನ್ ಅವರು ಪಂಜಾಬ್ ವಿಧಾನಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜಕೀಯ ತೊರೆಯಲು ನಿರ್ಧರಿಸಿರುವುದಾಗಿ ಹೇಳಿದ್ದಾರೆ.

ಖರಾರ್ ಕ್ಷೇತ್ರದ ಶಾಸಕಿ ಮಾನ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಪಂಜಾಬ್ ವಿಧಾನಸಭಾ ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವಾನ್ ಅವರಿಗೆ ಕಳುಹಿಸಿದ್ದಾರೆ.
ನಾನು ರಾಜಕೀಯ ತೊರೆಯಲು ನಿರ್ಧರಿಸಿದ್ದೇನೆ. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಸ್ಪೀಕರ್ ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕು. ಪಕ್ಷಕ್ಕೆ ನನ್ನ ಶುಭಾಶಯಗಳು. ಪಂಜಾಬ್ ಸರ್ಕಾರ ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಮಾನ್ ಅವರು X ನಲ್ಲಿ ಪೋಸ್ಟ್ ಮಾಡಿದ್ದಾರೆ.