ಧರ್ಮಸ್ಥಳ ಪ್ರಕರಣ: ವಿಶೇಷ ತನಿಕಾ ತಂಡಕ್ಕೆ ವರ್ಗಾಯಿಸಿ ಸರಕಾರದ ಆದೇಶ
ಮಂಗಳೂರು: ‘ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ
ಎನ್ನಲಾದ ಹಲವು ಕೊಲೆ ಆರೋಪ ಪ್ರಕರಣ’ವನ್ನು ವಿಶೇಷ ತನಿಖಾ ತಂಡ(ಎಸ್.ಐ.ಟಿ)ಕ್ಕೆ ವರ್ಗಾಯಿಸಿ ರಾಜ್ಯ ಸರಕಾರ ಜು.19ರಂದು ಆದೇಶಿಸಿದೆ.
ಈ ಬಗ್ಗೆ ಪ್ರಕಟನೆ ಹೊರಡಿಸಿರುವ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳಲಿದೆ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.
ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣವನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ” ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.



