ಬಿಜೆಪಿಯಿಂದ ಕಾಂಗ್ರೆಸ್ ಸೇರ್ಪಡೆ
ಪುತ್ತೂರು: ಬಿಜೆಪಿ ಕಾರ್ಯಕರ್ತರೋರ್ವರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದು ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.

ಶಾಸಕ ಅಶೋಕ್ ಕುಮಾರ್ ರೈ ಅವರ ಸಮ್ಮುಖದಲ್ಲಿ ಬಿಜೆಪಿ ಕಾರ್ಯಕರ್ತ ಆರ್ಯಾಪು ಗ್ರಾಮದ ಸಂಪ್ಯ ಕೊಟ್ಲಾರ್ ನಿವಾಸಿ ರಾಮಕೃಷ್ಣ ನಾಯ್ಕ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಶಾಸಕರು ಪಕ್ಷದ ದ್ವಜ ನೀಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.