ಧರ್ಮಸ್ಥಳ ಪ್ರಕರಣ: ಪವಿತ್ರ ಕ್ಷೇತ್ರಕ್ಕೆ ಧಕ್ಕೆ ತರುವ ಕೆಲಸ ಆಗಬಾರದು- ಯು.ಟಿ. ಖಾದರ್
ಮಂಗಳೂರು: ಧರ್ಮಸ್ಥಳ ಸಾಕ್ಷಿ ದೂರು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಸರ್ಕಾರ ವಿಶೇಷ ತನಿಖಾ ತಂಡ (ಎಸ್ ಐಟಿ) ರಚನೆ ಮಾಡಿದೆ. ಸಮರ್ಪಕ ತನಿಖೆ ನಡೆದು ಸತ್ಯ ಸಂಗತಿ ಹೊರಬಂದು, ಕಾನೂನು ಕ್ರಮ ಕೈಗೊಳ್ಳಲಿ. ಆದರೆ, ತನಿಖೆ ಪೂರ್ವದಲ್ಲೇ ಪೂರ್ವಗ್ರಹದ ತೀರ್ಮಾನಕ್ಕೆ ಬರುವುದು ಸರಿಯಲ್ಲ. ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು, ಪವಿತ್ರ ಕ್ಷೇತ್ರಕ್ಕೆ ಧಕ್ಕೆ ತರುವ ಕೆಲಸ ಆಗಬಾರದು ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವ್ಯಕ್ತಿಯೊಬ್ಬರ ಹೇಳಿಕೆಯಂತೆ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣಗಳ ತನಿಖೆಗೆ ಸರ್ಕಾರ ವಿಶೇಷ ತನಿಖಾ ತಂಡ (ಎಸ್ ಐಟಿ) ರಚನೆ ಮಾಡಿದೆ. ಸಮರ್ಪಕ ತನಿಖೆ ನಡೆದು ಸತ್ಯ ಸಂಗತಿ ಹೊರಬಂದು, ಕಾನೂನು ಕ್ರಮ ಕೈಗೊಳ್ಳಲಿ. ಆದರೆ, ತನಿಖೆ ಪೂರ್ವದಲ್ಲೇ ಪೂರ್ವಗ್ರಹದ ತೀರ್ಮಾನಕ್ಕೆ ಬರುವುದು ಸರಿಯಲ್ಲ. ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಪವಿತ್ರ ಕ್ಷೇತ್ರಕ್ಕೆ ಧಕ್ಕೆ ತರುವ ಕೆಲಸ ಆಗಬಾರದು. ಎಂದು ಖಾದರ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ವಿಧಾನಸಭೆಯ ಮುಂಗಾರು ಅಧಿವೇಶನವು ಆಗಸ್ಟ್ 11ರಿಂದ 22ರವರೆಗೆ ನಡೆಯಲಿದೆ. ಅಧಿವೇಶನದ ಅವಧಿ ವಿಸ್ತರಣೆ ಅಗತ್ಯವಿದ್ದಲ್ಲಿ ಸಂಬಂಧಪಟ್ಟ ಕಮಿಟಿ ಚರ್ಚಿಸಿ ಅಂತಿಮಗೊಳಿಸುತ್ತದೆ ಎಂದರು.