ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ದಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.25ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ