ಪುತ್ತೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಪುತ್ತೂರು: ನಗರ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಸುಮಾರು 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಜು.24ರಂದು ಬಂಧಿಸಿದ್ದಾರೆ.

ಉಪ್ಪಿನಂಗಡಿ ಠಾಣಾ ಪೊಲೀಸ್ ಉಪನಿರೀಕ್ಷರಾದ ಕೌಶಿಕ್ ರವರ ನೇತೃತ್ವದಲ್ಲಿ, ಸಿಬ್ಬಂದಿಗಳಾದ ಸಿ ಹೆಚ್ ಸಿ 685 ಪ್ರಶಾಂತ್ ರೈ, ಸಿಪಿಸಿ 2283 ಶ್ರೀಶೈಲ ಎಂ.ಕೆ, ಸಿಪಿಸಿ 2404 ಮಹಮ್ಮದ್ ಮೌಲಾನಾ ರವರು ಹಾಸನ ಜಿಲ್ಲೆಯ ಬೇಲೂರು ಎಂಬಲ್ಲಿ ಆರೊಪಿ ಸಾಮಿಯಾದ ಔರಾನ್ ಯಾನೆ ರಿಯಾಜ್ (33) ಬೇಲೂರು ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.