ಕರಾವಳಿ

ಧರ್ಮಸ್ಥಳ ಪ್ರಕರಣ: ಬಿಗಿ ಪೊಲೀಸ್ ಬಂದೋಬಸ್ತ್ ನೊಂದಿಗೆ ದೂರುದಾರ ಗುರುತಿಸಿದ ಸ್ಥಳದಲ್ಲಿ ಅಗೆಯುವ ಪ್ರಕ್ರಿಯೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು
ಮೃತದೇಹಗಳನ್ನು ಹೂತು ಹಾಕಿರುವುದಾಗಿ ವ್ಯಕ್ತಿಯೋರ್ವ ದೂರು ನೀಡಿರುವ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿ ತನಿಖೆ ಮುಂದುವರಿದಿದ್ದು, ದೂರುದಾರ ಗುರುತಿಸಿರುವ ಸ್ಥಳಗಳನ್ನು ಅಗೆಯುವ ಪ್ರಕ್ರಿಯೆ ಆರಂಭಗೊಂಡಿದೆ ಎನ್ನಲಾಗಿದೆ. ದೂರುದಾರನನ್ನೂ ಎಸ್‌ಐಟಿ ಸ್ಥಳಕ್ಕೆ ಕರೆತಂದಿದೆ.



ಜು.28ರಂದು ದೂರುದಾರ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಾನು ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು 13 ಸ್ಥಳಗಳನ್ನು ಗುರುತಿಸಿದ್ದನು. ಆ ಸ್ಥಳಗಳಿಗೆ ಜು.29ರಂದು ಮತ್ತೆ ಆಗಮಿಸಿರುವ ಎಸ್‌ಐಟಿ ತಂಡ ಗುರುತು ಮಾಡಿರುವ ಸ್ಥಳಗಳನ್ನು ಅಗೆಯಲು ಕಾರ್ಮಿಕರನ್ನು ಕರೆಸಿದೆ. ಈಗಾಗಲೇ ಕಾರ್ಮಿಕರು ಬೇಕಾದ ಸಾಮಗ್ರಿಗಳೊಂದಿಗೆ ಸ್ಥಳಕ್ಕೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!