ಕರಾವಳಿರಾಜಕೀಯ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ಲಾಸ್ಟಿಕ್ ನಿಷೇಧ: ಸಹಕರಿಸುವಂತೆ ಈಶ್ವರ ಭಟ್ ಮನವಿ

ಪುತ್ತೂರು: ಕರ್ನಾಟಕದ ದೇವಸ್ಥಾನಗಳಲ್ಲಿ 2025ರ ಆ.15ರಿಂದ ನೀರಿನ ಬಾಟಲಿ ಸೇರಿದಂತೆ ಎಲ್ಲಾ ರೀತಿಯ ಪ್ಲಾಸ್ಟಿಕ್‌ಗಳನ್ನು ನಿಷೇಧ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಜರಾಯಿ ಇಲಾಖೆಯ ಅಧೀನದಲ್ಲಿರುವ ದೇವಸ್ಥಾನಗಳಲ್ಲಿ ಮಾತ್ರವಲ್ಲದೆ, ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿಯೂ ಎಲ್ಲಾ ಬಗೆಯ ಪ್ಲಾಸ್ಟಿಕ್ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು ಇದಕ್ಕೆ ಪೂರಕವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲೂ ಪ್ಲಾಸ್ಟಿಕ್ ನಿಷೇಧ ಮಾಡುವಲ್ಲಿ ಭಕ್ತರು ಸಹಕಾರ ನೀಡುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ವಿನಂತಿಸಿದ್ದಾರೆ.


ಮಾಧ್ಯಮದೊಂದಿಗೆ ಮಾತನಾಡಿದ ಅವರು ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸುವಂತೆ ಸರಕಾರ ಸುತ್ತೋಲೆ ಹೊರಡಿಸಿದೆ. ಅದರಂತೆ ಮಹಾಲಿಂಗೇಶ್ವರ ದೇವಸ್ಥಾನದಲ್ಲೂ ಪ್ಲಾಸ್ಟಿಕ್ ನಿಷೇಧ ಮಾಡಲಿದ್ದೇವೆ. ದೇವಳದಿಂದ ಪ್ರಸಾದ ವಿತರಣೆ, ವಿಶೇಷ ಪೂಜೆ, ರುದ್ರಾಭಿಷೇಕ ಸಹಿತ ಇತರ ಸೇವೆಗಳ ಪ್ರಸಾದ ವಿತರಣೆಯಲ್ಲಿ ಪ್ಲಾಸ್ಟಿಕ್ ಬಳಸುವುದಿಲ್ಲ. ಅದೆ ರೀತಿ ಭಕ್ತರು ಕೂಡಾ ದೇವಸ್ಥಾನಕ್ಕೆ ಬರುವಾಗ ಪ್ಲಾಸ್ಟಿಕ್ ಚೀಲ ತರದಂತೆ ಅವರು ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!