ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ-ಜನಪ್ರತಿನಿದಿನಗಳ ವಿಶೇಷ ನ್ಯಾಯಾಲಯದ ತೀರ್ಪು
ಬೆಂಗಳೂರು: ಮೈಸೂರಿನ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಪ್ರಕಟಿಸಿದೆ.

ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದರು. ಇದೀಗ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದಾರೆ.
ಪ್ರಜ್ವಲ್ ರೇವಣ್ಣ ಗರಿಷ್ಠ ಶಿಕ್ಷೆಗೆ ಒಳಪಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ತೀರ್ಪು ಪ್ರಕಟಿಸುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟರು. ಕಣ್ಣೀರು ಒರೆಸುತ್ತಲೇ ಪ್ರಜ್ವಲ್ ರೇವಣ್ಣ ಅಲ್ಲಿಂದ ತೆರಳಿದರು ಎಂದು ವರದಿಯಾಗಿದೆ.





