ಧರ್ಮಸ್ಥಳ ಪ್ರಕರಣ: ದೂರುದಾರ ಗುರುತಿಸಿದ 7ನೇ ಸ್ಥಳದಲ್ಲಿ ಸಿಗದ ಕಳೇಬರ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಲಾಗಿದೆ ಎಂದು ಸಾಕ್ಷಿ ದೂರುದಾರ ಗುರುತಿಸಿದ ಏಳನೆಯ ಸ್ಥಳದಲ್ಲಿ ಯಾವುದೇ ಕಳೇಬರಗಳು ಸಿಕ್ಕಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.

ಏಳನೇ ಸ್ಥಳದಲ್ಲಿ ಆ.1ರಂದು ಬೆಳಗ್ಗೆ ಎಸ್.ಐ.ಟಿ ತಂಡ ಕಾರ್ಮಿಕರನ್ನು ಉಪಯೋಗಿಸಿ ಅಗೆಯುವ ಕಾರ್ಯ ಆರಂಭಿಸಿತ್ತು. ಆದರೆ ಅಗೆಯವ ಸಂದರ್ಭದಲ್ಲಿ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ. ಹಾಗಾಗಿ 8ನೇ ಪಾಯಿಂಟ್ ನಲ್ಲಿ ಅಗೆಯಲು ಸಿದ್ಧತೆ ನಡೆಸಿದ್ದಾರೆ ಎಂದು ವರದಿಯಾಗಿದೆ.





