ಕರಾವಳಿಕ್ರೈಂ

ಪುತ್ತೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 35/2001 ಕಲಂ: 379 ಜೊತೆಗೆ 34 ಭಾ.ದಂ.ಸಂ  ನೇ ಪ್ರಕರಣದಲ್ಲಿ ಆರೋಪಿತನಾಗಿ 2018ರಲ್ಲಿ  ಜಾಮೀನು ಪಡೆದ ನಂತರ ನ್ಯಾಯಾಲಯದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಡಿಕೇರಿ ಸೋಮವಾರ ಪೇಟೆ ಮಹಮ್ಮದ್ ಹನೀಫ್ (55) ಎಂಬಾತನನ್ನು ಕುಶಾಲನಗರ ಎಂಬಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆದುಕೊಳ್ಳಲಾಗಿದೆ. ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಲಂ: 269 ಬಿ.ಎನ್ ಎಸ್ ರಂತೆ ಪ್ರಕರಣ ದಾಖಲು ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,  ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!