ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಕಾರಿ ಪೋಸ್ಟ್, ಓರ್ವನ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆಯಾಗುವಂತಹ ಸಂದೇಶ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಓರ್ವನ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಟ್ಸಪ್ ಸ್ಟೇಟಸ್ ನಲ್ಲಿ ಧರ್ಮಧರ್ಮಗಳ ನಡುವೆ ವೈಮನಸ್ಸು ಉಂಟಾಗುವಂತೆ ಹಾಗೂ ಭೀತಿಯನ್ನು ಹುಟ್ಟಿಸುವಂತಹ ಸಂದೇಶವನ್ನು ಹಾಕಿರುವ ಆರೋಪದಲ್ಲಿ
ಪ್ರಕರಣದ ಆರೋಪಿತ ರಕ್ಷಿತ್ ಶೆಟ್ಟಿ ಎಂಬಾತನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 69/2025, ಕಲಂ:353(1)(ಬಿ), 353(2) ಬಿಎನ್ ಎಸ್ 2023 ರಂತೆ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.





