ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಯವರಿಗೆ ಆಹ್ವಾನ
ಮಂಗಳೂರು: ಮಂಗಳೂರಿನ ಬಾವುಟಗುಡ್ಡೆಯಲ್ಲಿ ಸ್ಥಾಪಿಸಿರುವ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯ ಲೋಕಾರ್ಪಣೆ ಕಾಯ೯ಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಹ್ವಾನ ನೀಡಲಾಯಿತು.
ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ,ಸಮಿತಿಯ ಪದಾಧಿಕಾರಿಗಳು
ಸಂಸದ ನಳಿನ್‌ಕುಮಾರ್ ಕಟೀಲ್ ಅವರ ಮುಖಾಂತರ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಆಹ್ವಾನಿಸಲಾಯಿತು.