ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್
ಬೆಂಗಳೂರು: ಮನೆಗೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ದೋಷಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಕೆ.ಆರ್ ನಗರದಲ್ಲಿ ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ವಾದ ಪ್ರತಿವಾದದ ಬಳಿಕ ನ್ಯಾ. ಗಜಾನನ ಭಟ್ ಅವರ ಪೀಠ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದೆ.