ಸುಳ್ಯ: ಅಕ್ರಮ ಕೆಂಪು ಕಲ್ಲು ಸಾಗಾಟ, ಲಾರಿ ಮತ್ತು ಚಾಲಕರು ವಶಕ್ಕೆ
ಸುಳ್ಯ: ಕಾನೂನು ಬಾಹಿರವಾಗಿ ಯಾವುದೇ ಪರವಾನಿಗೆ ಇಲ್ಲದೇ ಕೆಂಪು ಕಲ್ಲನ್ನು ಸಾಗಾಟ ಮಾಡುತ್ತಿದ್ದಾಗ ಲಾರಿಯನ್ನು ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.

ಆ.3ರಂದು ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ನಾರ್ಕೊಡು ಎಂಬಲ್ಲಿ ಎರಡು ಲಾರಿಯಲ್ಲಿ, ಕಾನೂನು ಬಾಹಿರವಾಗಿ ಯಾವುದೇ ಪರವಾನಿಗೆ ಇಲ್ಲದೇ ಕೆಂಪು ಕಲ್ಲನ್ನು ಸಾಗಾಟ ಮಾಡುತ್ತಿದ್ದಾಗ ಸುಳ್ಯ ಪೊಲೀಸ್ ಠಾಣಾ ಎಸ್ ಐ ಸಂತೋಷ ಕುಮಾರ್ ಹಾಗೂ ಸಿಬ್ಬಂದಿಗಳು ಪತ್ತೆ ಹಚ್ಚಿ ಲಾರಿಗಳನ್ನು ಹಾಗೂ ಲಾರಿಗಳ ಚಾಲಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.