ಕ್ರೈಂ

ಪಿಡಿಓ ಕೊಲೆ ಪ್ರಕರಣ: ಆರೋಪಿಗಳು ಅರೆಸ್ಟ್

ರಾಯಚೂರು: ಜಿಲ್ಲೆಯ ಲಿಂಗಸುಗೂರು ಹೊರವಲಯದಲ್ಲಿ ನಡೆದಿದ್ದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಕೊಲೆ ಪ್ರಕರಣದ ಆರೋಪಿಗಳು ಸೆರೆ ಸಿಕ್ಕಿದ್ದಾರೆ.

ಕೋಟಾ ಗ್ರಾಪಂ ಪಿಡಿಓ ಗಜದಂಡಯ್ಯ ಕೊಲೆಯಾಗಿದ್ದರು. ಇದೀಗ ಕೊಲೆ ಪ್ರಕರಣದ ಆರೋಪಿಗಳನ್ನು ಲಿಂಗಸುಗೂರು ಪೊಲೀಸರು (Police) 24 ಗಂಟೆಯಲ್ಲಿ ಬಂಧಿಸಿದ್ದಾರೆ.

ಅಕ್ಟೋಬರ್ 6 ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ವಿಜಯದಶಮಿ ಹಿನ್ನೆಲೆ ಬನ್ನಿ ಕೊಡುವ ನೆಪದಲ್ಲಿ ಬೈಕ್ (Bike) ನಿಲ್ಲಿಸಿ ಕೊಲೆ ಮಾಡಲಾಗಿತ್ತು. ಇದೀಗ ಒಂದೇ ಹೆಸರಿನ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!