ಕರಾವಳಿಕ್ರೈಂ

ಖಾಸಗಿ ಸುದ್ದಿ ವಾಹಿನಿಯ ವರದಿಗಾರನ ಮೇಲೆ ನಡೆದ ಹಲ್ಲೆ ಆರೋಪ: ಪ್ರಕರಣ ದಾಖಲು

ಬೆಳ್ತಂಗಡಿ: ಉಜಿರೆಯಲ್ಲಿ ಖಾಸಗಿ ಸುದ್ದಿ ವಾಹಿನಿಯ ವರದಿಗಾರನ ಮೇಲೆ ನಡೆದ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವ‌ರ್, ಸಮೀರ್ ಸಹಿತ ಹಲವರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಖಾಸಗಿ ಸುದ್ದಿ ವಾಹಿನಿಯ ವರದಿಗಾರ ಹರೀಶ್ ಅವರು ನೀಡಿರುವ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.
ಉಜಿರೆಯ ಖಾಸಗಿ ಆಸ್ಪತ್ರೆಗೆ ವರದಿ ಮಾಡಲೆಂದು ತೆರಳಿದ ವೇಳೆ ಚಾನೆಲ್ ನ ಲೋಗೋ ನೋಡಿ ತಡೆದ ತಂಡ ತನ್ನ ಮೇಲೆ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಅದರಂತೆ ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣನವ‌ರ್, ಮಹೇಶ್ ಶೆಟ್ಟಿ ತಿಮರೋಡಿ, ಯೂಟ್ಯೂಬರ್ ಸಮೀ‌ರ್, ಜಯಂತ್ ಟಿ, ಹಾಗೂ ಇತರರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!