ಧರ್ಮಸ್ಥಳ: ಯೂಟ್ಯೂಬರ್‌ಗಳ ಮೇಲೆ ಹಲ್ಲೆ, ಓರ್ವ ಆರೋಪಿಯ ಬಂಧನ
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್‌ನಲ್ಲಿ ಆ.6ರಂದು ಸಂಜೆ ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಧರ್ಮಸ್ಥಳ ಕನ್ಯಾಡಿ ನಿವಾಸಿ ಸೋಮನಾಥ ಸಫಲ್ಯ(50) ಬಂಧಿತ ಆರೋಪಿ. ಈತನ ಧರ್ಮಸ್ಥಳ ಪೊಲೀಸರು ಆ.7ರಂದು ಕೊಕ್ಕಡದಲ್ಲಿ ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ