ಅಶ್ಲೀಲ ಪದ ಬಳಸಿ ಮಾತನಾಡಿ ವಿಡಿಯೋ ಪ್ರಸಾರ: ಬೆಳ್ತಂಗಡಿ ಠಾಣೆಯಲ್ಲಿ 2 ಪ್ರಕರಣ ದಾಖಲು
ಬೆಳ್ತಂಗಡಿ: ಬೆಳ್ತಂಗಡಿ ನಿವಾಸಿ ಶ್ರೀನಿವಾಸ (51) ಎಂಬವರ ದೂರಿನಂತೆ, ಸದ್ರಿಯವರು ಆ.8ರಂದು ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋಗಳನ್ನು ಪರಿಶೀಲಿಸುತ್ತಿರುವಾಗ, ರಾಕೇಶ್ ಶೆಟ್ಟಿ ಎಂಬಾತನು, ಯೂಟ್ಯೂಬ್‌ನಲ್ಲಿ ಸಾರ್ವಜನಿಕರಿಗೆ ಕಿರಿಕಿರಿಯಾಗುವಂತೆ ಅಶ್ಲೀಲ ಪದಗಳನ್ನು ಬಳಸಿ ಮಾತನಾಡಿರುವ ವಿಡಿಯೋ ಕಂಡು ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 81/2025 ಕಲಂ 296 ಬಿಎನ್ಎಸ್ ರಂತೆ ಪ್ರಕರಣ ದಾಖಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಬೆಳ್ತಂಗಡಿ ನಿವಾಸಿ ದಯಾನಂದ ( 44) ರವರು ಆ.8ರಂದು ಬೆಳಿಗ್ಗೆ, ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ಪರಿಶೀಲಿಸುತ್ತಿರುವಾಗ, sandya voice for justice ಎಂಬ ಪೇಸ್ ಬುಕ್ ಪೇಜ್ ನಲ್ಲಿ, ಸದ್ರಿ ಪೆಜ್ ನ್ನು ಹೊಂದಿರುವ ವ್ಯಕ್ತಿಯು, ಸಾರ್ವಜನಿಕರಿಗೆ ಕಿರಿಕಿರಿಯುಂಟಾಗುವ ರೀತಿಯಲ್ಲಿ ಅಶ್ಲೀಲ ಪದಗಳನ್ನು ಬಳಸಿ ಮಾತನಾಡಿರುವ ವಿಡಿಯೋ ಕಂಡುಬಂದಿರುತ್ತದೆ ಎಂಬುದಾಗಿ ನಿಡಿದ ದೂರಿನ ಮೇರೆಗೆ ಬೆಳ್ತಂಗಡಿ ಠಾಣೆಯಲ್ಲಿ ಅಕ್ರ: 82/2025 ಕಲಂ: 296 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.



