ಅಂತರ್ರಾಜ್ಯ ದರೋಡೆ ಪ್ರಕರಣಗಳ ಕುಖ್ಯಾತ ಆರೋಪಿಯ ಬಂಧನ
ಪುತ್ತೂರು: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಹಲವಾರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಕೇರಳ, ತ್ರಿಶೋರ್ ಜಿಲ್ಲೆಯ ನಿವಾಸಿ ಇಲಿಯಾಸ್ ಪಿ.ಎ ಎಂಬಾತನನ್ನು, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಅರುಣ್ ನಾಗೇಗೌಡ ರವರ ಮಾರ್ಗದರ್ಶನದಲ್ಲಿ, ಉಪ್ಪಿನಂಗಡಿ ಪೊಲೀಸ್ ಉಪನಿರೀಕ್ಷಕರಾದ ಕೌಶಿಕ್ ರವರ ನೇತೃತ್ವದ, ಪ್ರಶಾಂತ್ ರೈ, ಗಣೇಶ್, ಮ್ಯಾಥ್ಯೂ ವರ್ಗೀಸ್, ಶ್ರೀಶೈಲ ಎಂ.ಕೆ ರವರನ್ನು ಒಳಗೊಂಡ ವಿಶೇಷ ಪೊಲೀಸರ ತಂಡವು ಕೇರಳದಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿಯ ವಿರುದ್ಧ ಪುತ್ತೂರು ನಗರ ಠಾಣೆ , ಉಪ್ಪಿನಂಗಡಿ ಠಾಣೆ, ಧರ್ಮಸ್ಥಳ ಠಾಣೆಗಳಲ್ಲಿ ಪ್ರಕರಣಗಳಿದ್ದು, ಅಲ್ಲದೇ ಕೇರಳ ರಾಜ್ಯದ ತ್ರಿಶೋರ್ ಜಿಲ್ಲೆಯಲ್ಲಿ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಸುಮಾರು 20 ಪ್ರಕರಣಗಳು ದಾಖಲಾಗಿರುತ್ತದೆ.