ಕೊಳತ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಮಂಗಳೂರು: ಬಂಟ್ವಾಳ ತಾಲೂಕಿನ ಕೊಳತ್ತಮಜಲು ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಆ.10ರಂದು ಬಂಧಿಸಿದ್ದಾರೆ. ರಂಜಿತ್ ಯಾನೆ ರಂಜು (35) ಬಂಧಿತ ಆರೋಪಿ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ಮೇ 27ರಂದು ಆರೋಪಿಗಳು ಅಬ್ದುಲ್ ರಹಾನ್ ಅವರನ್ನು ಹತ್ಯೆಗೈದು ಅವರ ಸ್ನೇಹಿತ ಕಲಂದರ್ ಶಾಫಿ ಅವರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.