ರಾಹುಲ್ ಗಾಂಧಿ ಸೇರಿ ಹಲವು ಸಂಸದರು ಪೊಲೀಸ್ ವಶಕ್ಕೆ
ನವದೆಹಲಿ: ಮತಗಳ್ಳತನಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಕಚೇರಿಗೆ ಪ್ರತಿಭಟನಾ ರ‍್ಯಾಲಿ ಹೊರಟಿದ್ದ ರಾಹುಲ್ ಗಾಂಧಿ ಸೇರಿದಂತೆ ಹಲವು ಸಂಸದರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟದ ಸಂಸದರು, ಸಂಸತ್ ಭವನದಿಂದ ಚುನಾವಣಾ ಆಯೋಗದ ಕಚೇರಿಗೆ ಪ್ರತಿಭಟನಾ ರ‍್ಯಾಲಿ ನಡೆಸಲು ಮುಂದಾಗಿದ್ದ ವೇಳೆ ದೆಹಲಿ ಪೊಲೀಸರು ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ.
ಸಂಸತ್ ಭವನದ ಹೊರಗೆ ಭಾರಿ ಭದ್ರತೆ ಕಲ್ಪಿಸಲಾಗಿದೆ.