ಧರ್ಮಸ್ಥಳ: ಹಲ್ಲೆ, ಕೊಲೆಯತ್ನ ಆರೋಪ, ಪೊಲೀಸ್ ದೂರು ನೀಡಿದ ಜಯಂತ್ ಟಿ
ಬೆಳ್ತಂಗಡಿ: ಧರ್ಮಸ್ಥಳ ಪಾಂಗಳ ಕ್ರಾಸ್ ಎಂಬಲ್ಲಿ ಆ.6ರಂದು ಯೂಟ್ಯೂಬರ್ ಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಅದೇ ದಿನ ಸದ್ರಿ ಘಟನಾ ಸ್ಥಳದಲ್ಲಿದ್ದ ಕಡಬ ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ ಎಂಬವರ ಮೇಲೆ ಕೆಲವು ಕಿಡಿಗೇಡಿಗಳು ಹಲ್ಲೆಗೆ ಹಾಗೂ ಕೊಲೆಗೆ ಯತ್ನಿಸಿದ್ದಾರೆ ಎಂಬುದಾಗಿ ಸದ್ರಿ ಜಯಂತ್ ಟಿ ರವರು ಆ.11ರಂದು ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಬಗ್ಗೆ ಪರಿಶೀಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ದೂರಿನ ಬಗ್ಗೆ ಪರಿಶೀಲಿಸಲಾಗುತ್ತಿದ್ದು, ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ.