ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದ ಕಾರಿನಲ್ಲಿ ಅಕ್ರಮ ದನ ಸಾಗಾಟ: ಓರ್ವನ ಬಂಧನ, ಇಬ್ಬರು ಪರಾರಿ
ಬೆಳ್ತಂಗಡಿ: ತಾಲೂಕಿನ ಗುರುವಾಯನಕೆರೆಯಲ್ಲಿ ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದ ಕಾರಿನಲ್ಲಿ ಹಿಂಸಾತ್ಮಕವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ವಾಹನ ಸಹಿತ ಒಬ್ಬ ಆರೋಪಿ, ಸಾಗಾಟ ಮಾಡುತ್ತಿದ್ದ ದನಗಳನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿದು ಬಂದಿದೆ.
ಕಾರು ಚಾಲಕ ಮೂಡುಬಿದಿರೆ ಸುವರ್ಣ ನಗರ ನಿವಾಸಿ ಆರಿಫ್ (26) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಾಹನದಲ್ಲಿದ್ದ ಮೂಡುಬಿದಿರೆ ಸುವರ್ಣ ನಗರ ನಿವಾಸಿಗಳಾದ ರಜ್ವಾನ್(30)ಹಾಗೂ ಸಾಹಿಲ್(22) ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.