2012ರಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆ ತೆರಳಿ ನಾಪತ್ತೆಯಾಗಿದ್ದ ಹೇಮಲತಾ: ಸಹೋದರನಿಂದ ದೂರು
ಬೆಳ್ತಂಗಡಿ: 2012ರಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆ ತೆರಳಿದ ಕುಮಾರಿ ಹೇಮಲತಾ (17) ಎಂಬಾಕೆ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸುವಂತೆ ಆಕೆಯ ಸಹೋದರ ಕಾವಳಮೂಡೂರು ನಿವಾಸಿ ನಿತಿನ್ ದೇವಾಡಿಗ ಎಂಬವರು ಆ.14ರಂದು ಪೂಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕುಮಾರಿ ಹೇಮಲತಾ 2012 ರಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆ ಹೋದದವರು ಆ ಬಳಿಕ ಮನೆಗೆ ಹಿಂತಿರುಗಿ ಬಂದಿರುವುದಿಲ್ಲ. ಪ್ರಸ್ತುತ ಧರ್ಮಸ್ಥಳದಲ್ಲಿ ನಡೆಯುತ್ತಿರುವ ವಿದ್ಯಾಮಾನಗಳನ್ನು ಕಂಡು ನಾಪತ್ತೆಯಾಗಿರುವ ತನ್ನ ಸಹೋದರಿಯ ಬಗ್ಗೆ ತನಿಖೆ ನಡೆಸುವಂತೆ ನಿತಿನ್, ಪೂಂಜಾಲಕಟ್ಟೆ ಪೊಲೀಸ್ ಠಾಣೆಗೆ ನೀಡಿರುವ ದೂರರ್ಜಿಯನ್ನು ಪೊಲೀಸರು ಸ್ವೀಕರಿಸಿದ್ದು, ವಿಚಾರಣೆ ಕೈಗೊಂಡಿದ್ದಾರೆ.