ಕರಾವಳಿಕ್ರೈಂ

ದೇರಳಕಟ್ಟೆಯ ಮುತ್ತೂಟ್ ಪೈನಾನ್ಸ್ ಬ್ಯಾಂಕ್ ಕಳ್ಳತನ ಯತ್ನ  ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಯ ಸೆರೆ

ಮಂಗಳೂರು: ನಗರದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ದೇರಳಕಟ್ಟೆ ಪರಿಸರದ ಮುತ್ತೂಟ್ ಪೈನಾನ್ಸ್ ಬ್ಯಾಂಕ್ ಕಳ್ಳತನಕ್ಕೆ ಪ್ರಯತ್ನ ನಡೆಸಿದ ಪ್ರಕರಣದಲ್ಲಿ ದಸ್ತಗಿರಿಯಾಗದೇ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.


ಮಾ.29ರಂದು ರಾತ್ರಿ ದೇರಳಕಟ್ಟೆ ಪರಿಸರದಲ್ಲಿರುವ ಹೆಚ್.ಎಮ್ ಕಾಂಪ್ಲೇಕ್ಸ್ ನ ಮುತ್ತೂಟ್ ಪೈನಾನ್ಸ್ ಕಚೇರಿಯ ಮುಂದಿನ ಬಾಗಿಲಿನ ಸೈರನ್ ಹೂಟರ್ ನ ಕೇಬಲ್ ಅನ್ನು ತುಂಡು ಮಾಡಿ ಪೈನಾನ್ಸ್ ಕಂಪನಿಯಲ್ಲಿ ಕಳವು ಮಾಡಲು ಪ್ರಯತ್ನ ಮಾಡಿರುವುದಾಗಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿತ್ತು.

ಈ ಕಳ್ಳತನ ಪ್ರಕರಣದಲ್ಲಿ ಈಗಾಗಲೇ ಕೇರಳ ಇಡುಕ್ಕಿ ಮೂಲದ ಮುರಳಿ ಮತ್ತು ಕಾಂಞಿಗಾಡ್ ನ ಆರ್ಷದ್ ಎಂಬಾತರು ಬಂಧಿತರಾಗಿದ್ದಾರೆ.  ಈ ಪ್ರಕರಣದಲ್ಲಿ ಪತ್ತೆಯಾಗದೇ ತಲೆಮರೆಸಿಕೊಂಡಿದ್ದ ಹಾಗೂ ಈ ಹಿಂದೆ ನಡೆದ ರಾಜಧಾನಿ ಜುವೆಲ್ಲರಿ ಶಾಪ್ ಕಳ್ಳತನ ಹಾಗೂ ಕೇರಳ ರಾಜ್ಯದ ವಿಜಯ ಬ್ಯಾಂಕ್ ಕಳ್ಳತನದ ಮುಖ್ಯ ಸಂಚುಕೋರನಾದ ಕಾಸರಗೋಡು ಜಿಲ್ಲೆಯ ಮಂಡಿಯಾನ್ ಮನೆಯ ಅಬ್ದುಲ್ ಲತೀಫ್ ಯಾನೆ ಲತೀಫ್ (47) ಎಂಬಾತನನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮದ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಅಬ್ದುಲ್ ಲತೀಫ್ @ ಲತೀಫ್ ಎಂಬಾತನ ಮೇಲೆ ಈ ಹಿಂದೆ ಕೇರಳ ರಾಜ್ಯದ ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಧಾನಿ ಜುವೆಲ್ಲರಿ ಶಾಪ್ ನ ಸುಮಾರು 20 ಕೆಜಿಯಷ್ಟು ಬಂಗಾರವನ್ನು ಕಳ್ಳತನ ಮಾಡಿದ ಪ್ರಕರಣ ಮತ್ತು ಕೇರಳ ರಾಜ್ಯದ ಚಂದೇರ್ ಪೊಲೀಸ್ ಠಾಣಾ ವ್ಯಾಪ್ತಿಯ  ಚೆರವತ್ತೂರು ವಿಜಯ ಬ್ಯಾಂಕ್ ನ ಸುಮಾರು 15.80 ಕೆಜಿಯಷ್ಟು ಬಂಗಾರ ಮತ್ತು 2.5 ಲಕ್ಷ ರೂ. ಹಣವನ್ನು ಕಳ್ಳತನ ಮಾಡಿದ ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿರುತ್ತಾನೆ. ಕಾರ್ಯಾಚರಣೆಯಲ್ಲಿ ಸಿಸಿಬಿ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ

Leave a Reply

Your email address will not be published. Required fields are marked *

error: Content is protected !!