ಎಸ್.ಐ.ಟಿ ಕಾರ್ಯಾಚರಣೆ ಬಗ್ಗೆ ಸುಳ್ಳು ಪತ್ರಿಕಾ ಪ್ರಕಟನೆ ಆರೋಪ: ನ್ಯಾಯವಾದಿ ಮಂಜುನಾಥ್ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್‌ಐಟಿ ಕಾರ್ಯಾಚರಣೆ ಬಗ್ಗೆ ಸಾರ್ವಜನಿಕರಲ್ಲಿ ಭಯವುಂಟು ಮಾಡುವಂತಹ ಅನಧಿಕೃತ ಮಾಹಿತಿಗಳನ್ನು ಒಳಗೊಂಡಿರುವ ಸುಳ್ಳು ಪತ್ರಿಕಾ ಪ್ರಕಟಣೆಯನ್ನು ಪ್ರಸಾರ ಮಾಡಿರುವ ಆರೋಪದಲ್ಲಿ ನ್ಯಾಯವಾದಿ ಮಂಜುನಾಥ್ ಎನ್. ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಜುನಾಥ್ 2003ರಲ್ಲಿ ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ತಾಯಿ ಸುಜಾತಾ ಭಟ್ ಪರ ವಕೀಲರಾಗಿದ್ದಾರೆ.
ಧರ್ಮಸ್ಥಳ ನಿವಾಸಿ ರಘುರಾಮ ಶೆಟ್ಟಿ ಎಂಬವರು ಈ ಬಗ್ಗೆ ದೂರು ನೀಡಿದ್ದು, ಪ್ರಸಕ್ತ ಎಸ್‌ಐಟಿಯಿಂದ ನಡೆಯುತ್ತಿರುವ ಕಾರ್ಯಾಚರಣೆ ಬಗ್ಗೆ ನ್ಯಾಯವಾದಿ ಮಂಜುನಾಥ್ ಸುಳ್ಳು ಪತ್ರಿಕಾ ಪ್ರಕಟನೆಗಳನ್ನು ಬಿಡುಗಡೆ ಮಾಡಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗುವಂತೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ದೂರಿನನ್ವಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.