ಧರ್ಮಸ್ಥಳ ಪ್ರಕರಣ: ಎಸ್.ಐ.ಟಿಯಿಂದ ಅನಾಮಿಕ ದೂರುದಾರನ ಬಂಧನ
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿದ್ದ ದೂರುದಾರನನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಆ.23 ರಂದು ಬೆಳಗ್ಗೆ ಬಂಧಿಸಿ 11 ಗಂಟೆಗೆ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ ಎನ್ನಲಾಗಿದೆ.
ಶುಕ್ರವಾರ ಬೆಳಿಗ್ಗೆ ದೂರುದಾರನನ್ನು ಎಸ್.ಐ.ಟಿ ಕಚೇರಿಗೆ ಕರೆದೊಯ್ದಿದ್ದ ಅಧಿಕಾರಿಗಳು ತೀವ್ರ ವಿಚಾರಣೆಯ ಬಳಿಕ ಶನಿವಾರ ಬೆಳಿಗ್ಗೆ ಬಂಧಿಸಿದ್ದಾರೆ ಎಂದು ವರದಿಯಾಗಿದೆ.