ಕರಾವಳಿರಾಜಕೀಯ

ಕಡಬ ಪಟ್ಟಣ ಪಂಚಾಯತ್ ಫಲಿತಾಂಶ: ಮೊದಲ ಅಗ್ನಿ ಪರೀಕ್ಷೆಯಲ್ಲಿ ಪಾಸಾದ ಅಭಿಲಾಶ್

ಕಡಬ ಪಟ್ಟಣ ಪಂಚಾಯತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿ ಸಿದ್ದು 13 ಸ್ಥಾನಗಳ ಪೈಕಿ 8ಸ್ಥಾನಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡು ಯಶಸ್ವಿಯಾಗಿದೆ.

ಕಡಬ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾಗಿ ಕೆಲವು ತಿಂಗಳ ಹಿಂದೆ ಅಧಿಕಾರ ವಹಿಸಿಕೊಂಡಿದ್ದ ಅಭಿಲಾಶ್ ಪಿ.ಕೆ ಅವರ ಪಾಲಿಗೆ ಈ ಚುನಾವಣೆ ಬಹಳ ಮಹತ್ವಪೂರ್ಣದಾಗಿತ್ತು. ಅವರು ಕಡಬ ಬ್ಲಾಕ್ ಅಧ್ಯಕ್ಷರಾದ ಮೇಲೆ ಇದು ಪ್ರಥಮ ಚುನಾವಣೆ ಆಗಿದ್ದರಿಂದ ಸಹಜವಾಗಿ ಇದು ಅವರಿಗೆ ಒಂದು ರೀತಿಯ ಅಗ್ನಿಪರೀಕ್ಷೆಯಾಗಿತ್ತು. ಒಂದು ವೇಳೆ ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿದ್ದೇ ಆಗಿದ್ದಲ್ಲಿ ಅಭಿಲಾಶ್ ಅವರಿಗೆ ಹಿನ್ನಡೆಯಾಗುವ ಸಾಧ್ಯತೆ ಕೂಡ ಇತ್ತು. ಆದರೆ ತನ್ನ ಯಶಸ್ವಿ ಕಾರ್ಯಚಟುವಟಿಕೆಯ ಮೂಲಕ ಕಡಪ ಪಟ್ಟಣ ಪಂಚಾಯತನ್ನು ಕಾಂಗ್ರೆಸ್ ತೆಕ್ಕೆಗೆ ಸೆಳೆಯುವಲ್ಲಿ ಯಶಸ್ವಿಯಾಗುವ ಮೂಲಕ ಅಭಿಲಾಶ್ ಪಿ.ಕೆ ಪ್ರಥಮ ಅಗ್ನಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಕಾಂಗ್ರೆಸ್ ಪಕ್ಷದ ಜಿಲ್ಲಾಮಟ್ಟದ ನಾಯಕರು, ಕಡಬ ಬ್ಲಾಕ್ ನ ಮಾಜಿ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು, ಉಸ್ತುವಾರಿಗಳು ಹಾಗೂ ಸ್ಥಳೀಯ ಮಟ್ಟದ ನಾಯಕರ ಮತ್ತು ಕಾರ್ಯಕರ್ತರ ಒಗ್ಗಟ್ಟು ಮತ್ತು  ಪರಿಶ್ರಮದ ಫಲವಾಗಿ ಕಾಂಗ್ರೆಸ್ ಗೆಲುವನ್ನು ಸಾಧಿಸಿದೆ. ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಅಭಿಲಾಷ್ ಅವರು ಆಯ್ಕೆಯಾದ ಬಳಿಕ ಪ್ರಥಮ ಚುನಾವಣೆಯಲ್ಲೇ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಅವರ ನಾಯಕತ್ವ ಪಕ್ಷದ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.

Leave a Reply

Your email address will not be published. Required fields are marked *

error: Content is protected !!