ಕರಾವಳಿ

ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಆರೋಪ, ನಾಲ್ಕು ಲಾರಿಗಳು ವಶಕ್ಕೆ



ಸುಳ್ಯ: ಅಕ್ರಮವಾಗಿ ಕೆಂಪು ಕಲ್ಲುಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ನಾಲ್ಕು ಲಾರಿಗಳನ್ನು ಸುಳ್ಯ ಪೊಲೀಸರು ವಶ ಪಡಿಸಿಕೊಂಡ ಘಟನೆ ಜಾಲ್ಲೂರು ಗ್ರಾಮದ ಅಡ್ಕಾರಿನಲ್ಲಿ ಆ.24ರಂದು ನಡೆದಿದೆ.

ಮುರೂರು ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಲಾರಿಗಳಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸುಳ್ಯ ಪೊಲೀಸರು ಖಚಿತ ಮಾಹಿತಿ ಮೇರೆಗೆ ಲಾರಿಗಳನ್ನು ವಶಪಡಿಸಿದ್ದಾರೆ.
ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!