ಮಿಲಾದ್ ಕಾಲ್ನಡಿಗೆ ಜಾಥಾದಲ್ಲಿ ಭಾಗವಹಿಸಿದವರಿಗೆ ಹೇಮನಾಥ ಶೆಟ್ಟಿ ನೇತೃತ್ವದಲ್ಲಿ ಸಿಹಿ ವಿತರಣೆ: ವ್ಯಾಪಕ ಮೆಚ್ಚುಗೆ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಮ್ ಯುವಜನ ಪರಿಷತ್ ಹಾಗೂ ಈದ್ ಮಿಲಾದ್ ಸಮಿತಿ ಪುತ್ತೂರು ಇದರ ಆಶ್ರಯದಲ್ಲಿ ಈದ್ ಮಿಲಾದ್ ಪ್ರಯುಕ್ತ ನಡೆದ ಬೃಹತ್ ಕಾಲ್ನಡಿಗೆ ಜಾಥಾದಲ್ಲಿ ಭಾಗವಹಿಸಿದವರಿಗೆ
ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿಯವರ ನೇತೃತ್ವದಲ್ಲಿ ದರ್ಬೆಯಲ್ಲಿ ಸಿಹಿತಿಂಡಿ ವಿತರಿಸಲಾಯಿತು.

ಜಿ.ಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ, ಕೆ.ಸಿ ಅಶೋಕ್ ಶೆಟ್ಟಿ, ದಾಮೋದರ್ ಮುರ, ರವಿಪ್ರಸಾದ್ ಶೆಟ್ಟಿ, ನಾಗೇಶ್ ಆಚಾರ್ಯ, ಗಂಗಾಧರ ಶೆಟ್ಟಿ, ಕೇಶವ ಬೆದ್ರಾಳ ಮೊದಲಾದವರು ಉಪಸ್ಥಿತರಿದ್ದರು.
ಮುಸಲ್ಮಾನ ಬಾಂಧವರ ಈದ್ ಮಿಲಾದ್ ಕಾರ್ಯಕ್ರಮದಲ್ಲಿ ಸಿಹಿ ಹಂಚಿ ಸೌಹಾರ್ದತೆಯ ಸಂದೇಶ ಸಾರಿದ ಹೇಮನಾಥ ಶೆಟ್ಟಿ ನೇತೃತ್ವದ ತಂಡಕ್ಕೆ ಮುಸ್ಲಿಂ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.