ಕರಾವಳಿಕ್ರೈಂ

ಪುತ್ತೂರು: ಬಾಲಕಿಯ ಅತ್ಯಾಚಾರ, ಆರೋಪಿ ಬಂಧನ

ಪುತ್ತೂರು: ಬಾಲಕಿಯೊಬ್ಬಳಿಗೆ ಅತ್ಯಾಚಾರ ಎಸಗಿದ ಆರೋಪಿಯೊಬ್ಬನನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಸಾಂದರ್ಭಿಕ ಚಿತ್ರ


ಪುತ್ತೂರು ತಾಲೂಕಿನ ಕಬಕ ಗ್ರಾಮದ ಮುರ ನಿವಾಸಿ ಸಫ್ವಾನ್ ಯಾನೆ ಅಫ್ವಾನ್ ಬಂಧಿತ ಆರೋಪಿ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸೆ.9ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಪುತ್ತೂರು ನಗರಠಾಣಾ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಾಲಕಿಯು 2025ರ ಮಾರ್ಚ್‌ನಿಂದ ಆರೋಪಿಯ ಜೊತೆ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಳು. ಒಂದು ದಿನ ಬಾಲಕಿಯನ್ನು ಭೇಟಿಯಾಗಲು ರೈಲ್ವೆ ಟ್ರಾಕ್ ಬಳಿ ಗುಡ್ಡ ಪ್ರದೇಶಕ್ಕೆ ಬರಲು ಆರೋಪಿ ತಿಳಿಸಿದ್ದು, ಅದರಂತೆ ಬಾಲಕಿ ತೆರಳಿದಾಗ ಆತ ಬಲವಂತದಿಂದ ದೈಹಿಕ ಸಂಪರ್ಕ ಮಾಡಿದ್ದ ಎನ್ನಲಾಗಿದೆ ಆ ಬಳಿಕವೂ ಆರೋಪಿ ಗುಡ್ಡ ಪ್ರದೇಶಕ್ಕೆ ಬರುವಂತೆ ಹೇಳಿ ಅನೇಕ ಬಾರಿ ಬಲವಂತದಿಂದ ದೈಹಿಕ ಸಂಪರ್ಕ ಮಾಡಿರುವುದಾಗಿ ಬಾಲಕಿ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.
ಆರೋಪಿಯ ವಿರುದ್ಧಪೊಕ್ಸಿ ಕಾಯ್ದೆ ಹಾಗೂ ಇತರ ಕಲಂಗಳಂತೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *

error: Content is protected !!