ಕರಾವಳಿಕ್ರೈಂ

ಉಜಿರೆಯ ಲಾಡ್ಜ್‌ನಲ್ಲಿ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ಬೆಳ್ತಂಗಡಿ: ತಾಲೂಕಿನ ಉಜಿರೆಯ ವಸತಿಗೃಹದಲ್ಲಿ 2014ರ ಮಾರ್ಚ್ 1ರಂದು ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಚಿಕ್ಕಮಗಳೂರು ಜಿಲ್ಲೆಯ ಬಾಳಪ್ಪ ಎಂ. ಕಳ್ಕೊಳ್ಳಿ ಎಂಬಾತನಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆಯ ನಿರೀಕ್ಷಕ ಲಿಂಗಪ್ಪ ಪೂಜಾರಿ, ಬೆಳ್ತಂಗಡಿ ಸಿಜೆ ಮತ್ತು ಎಂಎಫ್‌ಸಿ ನ್ಯಾಯಾಲ ಯಕ್ಕೆ ದೋಷರೋಪಾಣಾ ಪಟ್ಟಿಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಪರಿಶಿಷ್ಟ ಜಾತಿ ಮತು ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆಗೆ ಸಂಬಂಧಿಸಿ ತನಿಖೆ ನಡೆಸಿದ ಆಗಿನ ಬಂಟ್ವಾಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ರಾಹುಲ್ ಕುಮಾ‌ರ್ ಶಹಪುರ್ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಅವರು ಆರೋಪಿ ಬಾಳಪ್ಪ ಎಂ. ಕಳ್ಕೊಳ್ಳಿ ಎಂಬಾತನಿಗೆ ಜೀವಾವಧಿ ಶಿಕ್ಷೆ ಮತ್ತು 15,000 ರೂ. ದಂಡ (ದಂಡ ಪಾವತಿಸದಿದ್ದರೆ ತಿಂಗಳು ಹೆಚ್ಚುವರಿ ಜೈಲು) ಮತ್ತು 2 ವರ್ಷಗಳ ಸರಳ ಜೈಲು ಶಿಕ್ಷೆ ಮತ್ತು 5,000 ರೂ. ದಂಡ (ಪಾವತಿಸದಿದ್ದರೆ 3 ತಿಂಗಳು ಹೆಚ್ಚುವರ ಜೈಲು) ವಿಧಿಸಿ ಆದೇಶಿಸಿದ್ದಾರೆ. ಸರಕಾದ ಅಭಿಯೋಜಕರಾಗಿ ಜ್ಯೋತಿ ಪಿ. ನಾಯಕ ವಾದ ಮಂಡಿಸಿದ್ದರು.

Leave a Reply

Your email address will not be published. Required fields are marked *

error: Content is protected !!