ಧರ್ಮಸ್ಥಳ ಪ್ರಕರಣ: ಚಿನ್ನಯ್ಯ ಮತ್ತೆ ಎಸ್‌ಐಟಿ ಕಸ್ಟಡಿಗೆ
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಆರೋಪಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಎಸ್‌ಐಟಿ ತನಿಖೆ ಮುಂದುವರಿದಿದ್ದು ಸೆ.3ರಂದು ಸಾಕ್ಷಿ ದೂರುದಾರನನ್ನು ನ್ಯಾಯಾಲಯದಿಂದ ಮತ್ತೆ ಮೂರು ದಿನಗಳ ಕಾಲ (ಸೆ6ರವರೆಗೆ)ಎಸ್‌ಐಟಿ ಕಸ್ಟಡಿಗೆ ಪಡೆದುಕೊಂಡಿದೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರನಾಗಿ ಬಂದ ಚಿನ್ನಯ್ಯನ ಎಸ್ಐಟಿ ಕಸ್ಟಡಿ ಅವಧಿ ಸೆ.3ಕ್ಕೆ ಮುಕ್ತಾಯವಾಗಿದ್ದು, ಈ ಹಿನ್ನೆಲೆ ಯಲ್ಲಿ ಆತನನ್ನು ಬೆಳ್ತಂಗಡಿ ನ್ಯಾಯಾಲಯದ ಮುಂದೆ ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆತನ್ನು ಮತ್ತೆ ಸೆ.6ರವರೆಗೆ ಎಸ್‌ಐಟಿ ವಶಕ್ಕೆ ಒಪ್ಪಿಸಿದೆ.
ಚಿನ್ನಯ್ಯನನ್ನು ಆ.23ರಂದು ಎಸ್ಐಟಿ ತಂಡ ಬಂಧಿಸಿದ್ದರು. ಅದೇ ದಿನ ಆತನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ಸೆ.3ರವರೆಗೆ ಎಸ್‌ಐಟಿ ವಶಕ್ಕೆ ಒಪ್ಪಿಸಿ ಆದೇಶ ನೀಡಿತ್ತು.