ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ: ಆರೋಪಿಗೆ ಜಾಮೀನು
ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ಸಹಪಾಠಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಯುವತಿ ಗರ್ಭಿಣಿಯಾಗಿ ಮಗುವಿಗೆ ಜನ್ಮವಿತ್ತ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಶ್ರೀ ಕೃಷ್ಣ ಜೆ. ರಾವ್‌ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಏಕಸದಸ್ಯ ಪೀಠವು ಸೆ.3 ರಂದು ಈ ಕುರಿತು ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ಜು.5ರ ಬೆಳಗ್ಗೆ ಪೊಲೀಸರು ಮೈಸೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿಗಳು ಮೈಸೂರಿನ ಟಿ. ನರಸೀಪುರ ಪ್ರದೇಶದಲ್ಲಿ ಕೃಷ್ಣನನ್ನು ವಶಕ್ಕೆ ಪಡೆದಿದ್ದರು.