ಹೊಸ ಹೇರ್ ಸ್ಟೈಲ್ ನೊಂದಿಗೆ ಹಾರ್ದಿಕ್ ಪಾಂಡ್ಯ
ಏಷ್ಯಾ ಕಪ್‌ಗೂ ಮುನ್ನ ಹಾರ್ದಿಕ್ ಪಾಂಡ್ಯ ತಮ್ಮ ಕೇಶ ವಿನ್ಯಾಸವನ್ನು ಬದಲಾಯಿಸಿಕೊಂಡಿದ್ದಾರೆ. ಅದರ ಫೋಟೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಹಾರ್ದಿಕ್ ಪಾಂಡ್ಯ, “ನ್ಯೂ ಮಿ” ಎಂಬ ಶೀರ್ಷಿಕೆಯನ್ನು ಸಹ ನೀಡಿದ್ದಾರೆ. ಹಾರ್ದಿಕ್ ಪಾಂಡ್ಯ ತಮ್ಮ ಹೊಸ ಹೇರ್ ಸ್ಟೈಲ್‌ನಿಂದಾಗಿ ಗುರುತೇ ಸಿಗದಷ್ಟು ಬದಲಾಗಿದ್ದಾರೆ.

ಗುರುವಾರ ಹಾರ್ದಿಕ್ ಪಾಂಡ್ಯ ಮುಂಬೈ ವಿಮಾನ ನಿಲ್ದಾಣದಲ್ಲಿ ಪಾಂಡ್ಯ ಕಾಣಿಸಿಕೊಂಡಾಗ ಅವರ ತಲೆಯ ತುಂಬ ಕಪ್ಪು ಕೂದಲು ಇದ್ದಿತ್ತು. ಆದರೆ ದುಬೈ ತಲುಪಿದ ಕೂಡಲೇ ಪಾಂಡ್ಯ ತಲೆಯಲ್ಲಿ ಕಪ್ಪು ಕೂದಲುಗಳು ನಾಪತ್ತೆಯಾಗಿರುವ ಜೊತೆಗೆ ಅವರ ಹೇರ್ ಸ್ಟೈಲ್ ಕೂಡ ಬದಲಾಗಿದೆ.
ಇದೀಗ ಹಾರ್ದಿಕ್ ಪಾಂಡ್ಯ ಅವರ ಹೊಸ ಲುಕ್ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದೆ. ಅಭಿಮಾನಿಗಳು ಹಾರ್ದಿಕ್ ಪಾಂಡ್ಯ ಅವರ ಈ ಲುಕ್ ಅನ್ನು ಇಂಗ್ಲೆಂಡ್‌ನ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಮತ್ತು ವೆಸ್ಟ್ ಇಂಡೀಸ್‌ನ ಮಾಜಿ ಕ್ರಿಕೆಟಿಗ ನಿಕೋಲಸ್ ಪೂರನ್ ಅವರೊಂದಿಗೆ ಹೋಲಿಕೆ ಮಾಡುತ್ತಿದ್ದಾರೆ.