ಅನಧಿಕೃತವಾಗಿ ನಿರ್ಮಾಣವಾಗಿರುವ ಧಾರ್ಮಿಕ ಕೇಂದ್ರದಲ್ಲಿ ಪರವಾನಿಗೆ ಪಡೆಯದೇ ಧ್ವನಿವರ್ಧಕ ಬಳಕೆ ಆರೋಪ: ಪ್ರಕರಣ ದಾಖಲು
ಬಂಟ್ವಾಳ: ಧಾರ್ಮಿಕ ಶಿಕ್ಷಣದ ಕಟ್ಟಡವೊಂದರಲ್ಲಿ ಅನಧಿಕೃತವಾಗಿ ಯಾವುದೇ ಪರವಾನಿಗೆ ಪಡೆಯದೇ ಧ್ವನಿವರ್ಧಕವನ್ನು ಬಳಸಿರುವ ಬಗ್ಗೆ ಸ್ಥಳೀಯರ ದೂರಿನ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ಅನುಮತಿ ಪಡೆದು ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕರಿಯಂಗಳ ಗ್ರಾಮದ ಪುಂಚಮೆ ಎಂಬಲ್ಲಿ ಇಸಾಕ್ ಎಂಬವರ ಅಧ್ಯಕ್ಷತೆಯಲ್ಲಿ ಕಾರ್ಯಾಚರಿಸುತ್ತಿರುವ ಧಾರ್ಮಿಕ ಶಿಕ್ಷಣದ ಕಟ್ಟಡ ಇದಾಗಿದ್ದು ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಧ್ವನಿಯಲ್ಲಿ ದಿನಕ್ಕೆ 5 ಬಾರಿಯಂತೆ ಆಝಾನ್ ಕೂಗುವುದರಿಂದ ಸುತ್ತಮುತ್ತಲಿನ ಪರಿಸರದ ಜನರಿಗೆ ತೊಂದರೆಯಾಗುತ್ತಿದೆ. ಈ ಮೂಲಕ ಧ್ವನಿವರ್ಧಕಗಳ ಬಳಕೆಯ ಬಗೆಗಿನ ಕಾನೂನನ್ನು ಉಲ್ಲಂಘಿಸಿರುತ್ತಾರೆ ಎಂಬುದಾಗಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ಬಂದ ದೂರಿನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.