ವಿಟ್ಲ, ಉಪ್ಪಿನಂಗಡಿಗೆ ಅಗ್ನಿ ಶಾಮಕ ಠಾಣೆ ನಿರ್ಮಾಣ: 15 ದಿವಸದೊಳಗೆ ಜಾಗ ಮಂಜೂರಾತಿಗೆ ಶಾಸಕ ಅಶೋಕ್ ರೈ ಸೂಚನೆ
ಪುತ್ತೂರು: ವಿಟ್ಲ ಮತ್ತು ಉಪ್ಪಿನಂಗಡಿಗೆ ಅಗ್ನಿ ಶಾಮಕ ಠಾಣೆಯ ಅಗತ್ಯವಿದ್ದು ಈ ವಿಚಾರವನ್ನು ಅಧಿವೇಶನದಲ್ಲೂ ಸರಕಾರದ ಗಮನಕ್ಕೆ ತಂದಿದ್ದೇನೆ, 15 ದಿವಸದೊಳಗೆ ಜಾಗ ಮಂಜೂರಾತಿಗೆ ಶಾಸಕ ಅಶೋಕ್ ರೈ ಕಂದಾಯ ಇಲಾಖೆಗೆ ಸೂಚನೆ ನೀಡಿದ್ದಾರೆ.

ಸೋಮವಾರ ಶಾಸಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಜಿಲ್ಲಾ ಅಗ್ನಿ ಶಾಮಕದಳ ಅಧಿಕಾರಿ ಮಹಮ್ಮದ್ ಜುಲ್ಫಿಕರ್ ನವಾಝ್ ಕೆ ಪಿ ಯವರು ವಿಟ್ಲ ಮತ್ತು ಉಪ್ಪಿನಂಗಡಿಯಲ್ಲಿ ಅಗ್ನಿ ಶಾಮಕ ದಳ ಠಾಣೆ ನಿರ್ಮಾಣವಾಗುವಲ್ಲಿ ಈಗಾಗಲೇ ವಿಟ್ಲದಲ್ಲಿ ಜಾಗ ಗುರುತಿಸಲಾಗಿದೆ. ಉಪ್ಪಿನಂಗಡಿಯಲ್ಲೂ ಜಾಗದ ಅವಶ್ಯಕತೆ ಇದ್ದು ಜಾಗ ಮಂಜೂರಾತಿ ವಿಚಾರದಲ್ಲಿ ಶಾಸಕರ ಜೊತೆ ಚರ್ಚೆ ನಡೆಸಿದರು. ಈ ವೇಳೆ ಶಾಸಕರು ಕಂದಾಯ ಅಧಿಕಾರಿಗಳಿಗೆ ಕರೆ ಮಾಡಿ ಅಗ್ನಿ ಶಾಮಕ ಠಾಣೆ ನಿರ್ಮಾಣವಾಗುವಲ್ಲಿ ವಿಟ್ಲ ಮತ್ತು ಉಪ್ಪಿನಂಗಡಿಯಲ್ಲಿ 15 ದಿನದೊಳಗೆ ಜಾಗ ಗುರುತಿಸಿ ಇಲಾಖೆಗೆ ಹಸ್ತಾಂತರ ಮಾಡುವಲ್ಲಿ ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು.