ಆರ್ಯಾಪು ಗ್ರಾ.ಪಂ ಮಾಜಿ ಅಧ್ಯಕ್ಷರ ಹಲವು ಮಂದಿ ಕಾಂಗ್ರೆಸ್ ಸೇರ್ಪಡೆ
ಪುತ್ತೂರು: ಆರ್ಯಾಪು ಗ್ರಾಪಂ ಮಾಜಿ ಅಧ್ಯಕ್ಷರ ಸಹಿತ ಹಲವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಶಾಸಕ ಅಶೋಕ್ ಕುಮಾರ್ ರೈ ಸಮ್ಮುಖದಲ್ಲಿ ಆರ್ಯಾಪು ಗ್ರಾಪಂ ಮಾಜಿ ಅಧ್ಯಕ್ಷೆ ಗೀತಾ ಚೆನ್ನಪ್ಪ ಸಹಿತ ಸುಮಾರು 25ಕ್ಕೂ ಅಧಿಕ ಮಂದಿ ಬಿಜೆಪಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷ ಕೆ.ಪಿ ಆಳ್ವ, ಆರ್ಯಾಪು ವಲಯ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ರೈ ಸಹಿತ ಹಲವು ಪ್ರಮುಖರು ಇದ್ದರು.