ಧರ್ಮಸ್ಥಳ: ಯೂಟ್ಯೂಬರ್ ವಿರುದ್ದ ಸ್ಥಳೀಯ ಯುವಕರಿಂದ ಆಕ್ರೋಶ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಬಂಗ್ಲೆಗುಡ್ಡ ಪರಿಸರದಲ್ಲಿ ಮಹಜರು ಪ್ರಕ್ರಿಯೆ ನಡೆಯುತ್ತಿದ್ದ ವೇಳೆ ಸ್ಥಳೀಯ ಯುವಕರ ತಂಡವೊಂದು ಯೂಟ್ಯೂಬರ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಘಟನೆ ಸೆ.10ರಂದು ನಡೆದ ಬಗ್ಗೆ ವರದಿಯಾಗಿದೆ. ಸುಳ್ಳು ಸುದ್ದಿಗಳನ್ನು ಹರಡುತ್ತಿರುವುದಾಗಿ ಆರೋಪಿಸಿದ ತಂಡ, ಅವರು ಸ್ಥಳದಿಂದ ತೆರಳುವಂತೆ ಒತ್ತಾಯಿಸಿತು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಯುವಕರ ಗುಂಪನ್ನು ಚದುರಿಸಿದ್ದಾರೆ.